ಉಜಿರೆ: ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಉಜಿರೆ ಗ್ರಾಮ ಪಂಚಾಯತ್ ಗೆ ಡಿ.25ರಂದು ಡಾ|| ಚಿಕ್ಕ ಕೋಮರಿ ಗೌಡ’ ದತ್ತಿ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಪಂಚಾಯತ್ ರಾಜ್ ಪರಿಷತ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ , ಅಬ್ದುಲ್ ನಜೀರ್ ಸಾಬ್ ಜನ್ಮ ದಿನದ ಅಂಗವಾಗಿ ಚಾಮರಾಜನಗರದ ಗುಂಡ್ಲುಪೇಟೆಯ ಡಾ|| ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಮತ್ತು ಡಾ.ಚಿಕ್ಕಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಗ್ರಾಮ ಪಂಚಾಯತ್ ವಿಭಾಗದಲ್ಲಿ ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಶಸ್ತಿ ದೊರೆತಿದೆ.
ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯ ವಿಕೇಂದ್ರೀಕೃತ ಯೋಜನೆ ಇದರ ರಾಜ್ಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಪ್ರಶಸ್ತಿ ಪ್ರದಾನ ಮಾಡಿದರು.