ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ನೋಂದಾವಣೆ ಇಲ್ಲದ ಸ್ಕ್ಯಾನಿಂಗ್ ಯಂತ್ರ : ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ,ಮೆಷಿನ್ ವಶಕ್ಕೆ:

 

 

ಬೆಳ್ತಂಗಡಿ : ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಸಮೀಪದ ಗುರುವಾಯನಕೆರೆ ಬಳಿ ಕಾರ್ಯಚರಿಸುತ್ತಿರುವ ಅಭಯಾ  ಖಾಸಗಿ ಆಸ್ಪತ್ರೆಗೆ ಡಿ.28 ರಂದು ಮಂಗಳೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿ ತಂಡವು ದಾಳಿ ಮಾಡಿ ಪರಿಶೀಲನೆ ನಡೆಸಿದ ವೇಳೆ ನೋಂದಣಿ ಮಾಡದೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ.

ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!