ಉಜಿರೆ, ಡಿಕ್ಕಿ ಹೊಡೆದು ಪರಾರಿಯಾದ ವಾಹನ: ಅಪರಿಚಿತ ವ್ಯಕ್ತಿಯ ತಲೆಗೆ ಗಂಭೀರ ಗಾಯ:

 

 

 

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ವ್ಯಕ್ತಿಯ ತಲೆಗೆ ಗಂಭೀರ ಗಾಯವಾದ ಘಟನೆ ಉಜಿರೆಯ ಬೆಳಾಲು ರಸ್ತೆಯಲ್ಲಿ ಡಿ.31ರಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಬೆಳಾಲು ರಸ್ತೆಯಲ್ಲಿರುವ ಶಿವಾಜಿನಗರ ತಿರುವು ಬಳಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಗೆ ಡಿ.31 ರಂದು ಬೆಳಗ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಸ್ಥಿತಿಯಲ್ಲಿ ರಸ್ತೆಯಲ್ಲಿ ಎಸೆಯಲ್ಪಟ್ಟು ಬಿದ್ದಿದ್ದನ್ನು ಸ್ಥಳೀಯರು ನೋಡಿ ತಕ್ಷಣ 108 ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿ‌ ಚಿಕಿತ್ಸೆಗೆ ದಾಖಲಿಸಿದ್ದಾರೆ‌.

error: Content is protected !!