ಬೆಳ್ತಂಗಡಿ : ಯುವಕನ ಮೂಗನ್ನು ಕಚ್ಚಿ ತುಂಡರಿಸಿದ ಪ್ರಕರಣ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

 

 

 

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಪ್ರಕರಣದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂಬ ಯುವಕನ ಮೂಗು ತುಂಡರಿಸಿದ ಆರೋಪಿ ರಾಕೇಶ್21) ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು ,ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಘಟನೆಯಿಂದ ಗಾಯಗೊಂಡ ದೀಕ್ಷಿತ್ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವೇಣೂರು ಪೊಲೀಸ್ ಠಾಣೆಯಲ್ಲಿ ದೀಕ್ಷಿತ್ ನೀಡಿದ ದೂರಿನಂತೆ ಆರೋಪಿ ರಾಕೇಶ್ ವಿರುದ್ಧ ಐಪಿಸಿ 504,341,324,506 ಅಡಿ ಪ್ರಕರಣ ದಾಖಲಾಗಿದ್ದು. ವೇಣೂರು ಸಬ್ ಇನ್ಸ್ಪೆಕ್ಟರ್ ಶ್ರೀಶೈಲಾ ನೇತೃತ್ವದ ತಂಡ ಜ.2 ರಂದು ಆರೋಪಿ ರಾಕೇಶ್(21)ನನ್ನು ಬಂಧಿಸಿದೆ.

error: Content is protected !!