ತಾಯಿಯ ಸೀರೆಯನ್ನು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿ: ಉಜಿರೆಯ ಪೆರ್ಲ ಎಂಬಲ್ಲಿ ನಡೆದ ಘಟನೆ:

 

 

 

 

ಬೆಳ್ತಂಗಡಿ:8ನೇ ತರಗತಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ
ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ
ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದ
ಯಕ್ಷಿತ್ (14) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.

ಮನೆಯ ರೂಂ ನಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

error: Content is protected !!