ದ.ಕ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ. 14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ. ಈ ಮೂಲಕ ಕಳೆದ ವರ್ಷದಿಂದ ಕಾಲಮಿತಿ ಪದ್ಧತಿಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಭಕ್ತರ ಇಚ್ಚೆಯಂತೆ ಸಂಪೂರ್ಣ ರಾತ್ರಿ ಪ್ರದರ್ಶನಗೊಳ್ಳಲಿದೆ.
ಬೆಂಗಳೂರಿನ ಕೃಷ್ಣಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ಪೂರ್ತಿರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಸದ್ಯ ಉಚ್ಚ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ. 14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.
ಈ ಬಾರಿ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಯಕ್ಷಗಾನ ಪ್ರದರ್ಶನ ನೀಡಿದೆ.