ನಟ ಯಶ್‌ನನ್ನು ನೋಡಲು ದೌಡಾಯಿಸಿದ ಅಭಿಮಾನಿಗೆ ಅಪಘಾತ: ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಗದಗ: ಸ್ಯಾಂಡಲ್‌ವುಡ್ ನಟ ಯಶ್ ಅವರ ಈ ಬಾರಿಯ ಹುಟ್ಟುಹಬ್ಬ ನೋವನ್ನೇ ಹೊತ್ತು ಬಂದಂತಿದೆ. ಮೂವರು ಅಭಿಮಾನಿಗಳು ಮೃತಪಟ್ಟ ಕಹಿ ಘಟನೆ ಬೆನ್ನಲ್ಲೆ ಮತ್ತೊಬ್ಬ ಅಭಿಮಾನಿ ಅಸುನೀಗಿದ್ದಾನೆ.

ವಿದ್ಯುತ್ ಪ್ರವಹಿಸಿ ಮೂವರು ಯುವಕರು ಸಾವನ್ನಪ್ಪಿದ್ದ ಸೂರಣಗಿ ಗ್ರಾಮಕ್ಕೆ ಜ.08ರಂದು ಸಂಜೆ ಯಶ್ ಅವರು ಭೇಟಿ ನೀಡಿದ್ದರು. ಈ ವೇಳೆ ಯಶ್ ಅವರನ್ನು ನೋಡಲು ಆಗಮಿಸಿದ್ದ ಬಿಂಕದಕಟ್ಟಿ ಗ್ರಾಮದ ನಿಖಿಲ್ ಕರೂರ್ (22) ಎಂಬಾತ ನಟ ಯಶ್ ಹುಬ್ಬಳ್ಳಿಗೆ ವಾಪಸ್ಸಾಗುವಾಗ ತನ್ನ ದ್ವಿಚಕ್ರ ವಾಹನದಲ್ಲಿ ಯಶ್ ವಾಹನ ಫಾಲೋ ಮಾಡಲು ಮುಂದಾಗಿದ್ದ. ಈ ವೇಳೆ ದ್ವಿಚಕ್ರ ವಾಹನ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಗದಗ ನಗರದ ಖಾಸಗಿ ಆಸ್ಪತ್ರೆಗೆ ಯುವಕನನ್ನು ಶಿಫ್ಟ್ ಮಾಡಲಾಯ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಆತ ಸಾವನ್ನಪ್ಪಿದ್ದಾನೆ.

error: Content is protected !!