ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕೊರೊನಾ ಪಾಸಿಟಿವ್..!

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಅವರು ರಾಜಭವನದಲ್ಲಿ ಕ್ವಾರಂಟೈನ್‌ನಲ್ಲಿ ಇದ್ದು ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯರಗಳು ಸೂಕ್ತ ಚಿಕಿತ್ಸೆಯೊಂದಿಗೆ ನಿಗಾವಹಿಸಿ ಆರೈಕೆ ಮಾಡುತ್ತಿದ್ದಾರೆ.


ಕೊರೋನಾ ದೃಢಪಟ್ಟ ಹಿನ್ನಲೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

error: Content is protected !!