ಬೆಳ್ತಂಗಡಿ : 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿಯನ್ನು ಸೆರೆ ಹಿಡಿದ ಧರ್ಮಸ್ಥಳ ಪೊಲೀಸರು..!

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದು  ಕಳೆದ 5 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸಿ ಜೈಲಿಗಟ್ಟಿದ್ದಾರೆ.

ಪುತ್ತೂರು ತಾಲೂಕಿನ ಕಲ್ಲಗುಡ್ಡೆ, ನೂಜಿಬಾಲ್ತಿಲ ಗ್ರಾಮದ ಮಂಜೋಲಿ ನಿವಾಸಿ ವರ್ಗೀಸ್ @ ರಾಜನ್ ಎಂಬವರ ಮಗನಾದ ಪ್ರಬೀನ @ ಪ್ರವೀಣ(34) ಎಂಬಾತನ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದ ಈತ ಕಳೆದ 5 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೇ ಊರು ಬಿಟ್ಟು ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ.

ಜನವರಿ 11 ರಂದು ಆರೋಪಿ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಪೊಲೀಸರು ಮಧ್ಯಾಹ್ನ 1 ಗಂಟೆಗೆ ಪುತ್ತೂರು ತಾಲೂಕು ನೂಜಿಬಾಲ್ತಿಲ ಬಸ್ಸು ತಂಗುದಾಣದ ಬಳಿ ಆರೋಪಿಯನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ JMFC ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆರೋಪಿಗೆ ಕೋರ್ಟ್ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಹಾಗೂ ಧರ್ಮಸ್ಥಳ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅನಿಲ್ ಕುಮಾರ್.ಡಿ ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ್.ಎನ್ ಮತ್ತು ಗೋವಿಂದ ರಾಜ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

error: Content is protected !!