ಎಸ್ಎಸ್ಎಲ್ ಸಿ , ದ್ವಿತೀಯ ಪಿಯುಸಿ ಪರೀಕ್ಷೆ 1 ರ ವೇಳಾಪಟ್ಟಿ ಪ್ರಕಟ: ಒಂದೇ ದಿನ 3 ಪರೀಕ್ಷೆ ನಡೆಸುವ ಹೊಸ ಪದ್ಧತಿ ಜಾರಿ..!

 

 

ಬೆಂಗಳೂರು: ಎಸ್​ಎಸ್ಎಲ್​​ಸಿ 2024ರ ಪರೀಕ್ಷೆ-1 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 1 ರಿಂದ ಮಾರ್ಚ್ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿಗೆ ಒಂದೇ ದಿನ ಮೂರು ಪರೀಕ್ಷೆ ನಡೆಸುವ ಹೊಸ ಪದ್ದತಿ ಜಾರಿಯಾಗಿದೆ. ಹೊಸ ಪದ್ಧತಿಯಂತೆ ಮೊದಲ ವಾರ್ಷಿಕ ಪರೀಕ್ಷಾ ದಿನಾಂಕ ಪ್ರಕಟಗೊಂಡಿದೆ.

ಎಸ್ಎಸ್ಎಲ್​​ಸಿ ಪರೀಕ್ಷಾ ವೇಳಾಪಟ್ಟಿ ವಿವರ:

ಮಾ. 25 ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ಇದೆ. 27 ರಂದು ಸಮಾಜ ವಿಜ್ಞಾನ, 30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏಪ್ರಿಲ್ 2 ರಂದು ಗಣಿತ, ಸಮಾಜಶಾಸ್ತ್ರ, 3 ರಂದು ಅರ್ಥಶಾಸ್ತ್ರ, 4 ರಂದು ತೃತೀಯ ಭಾಷೆ ಹಿಂದಿ ಹಾಗೂ 6 ರಂದು ದ್ವಿತೀಯ ಭಾಷೆ ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಲಿದೆ.

ಕನ್ನಡ ವಿಷಯದಲ್ಲಿ 100 ಅಂಕಗಳಿಗೆ ಪರೀಕ್ಷೆ ಇದ್ದರೆ, ಇತರ ವಿಷಯಗಳಿಗೆ 80 ಅಂಕಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿದಿನ ಬೆಳಗ್ಗೆ 10.15 ರಿಂದ 1.30ರ ವರೆಗಿನ ಅವಧಿಯಲ್ಲಿ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ವಿವರ:

ಮಾರ್ಚ್ 1 ರಂದು ಕನ್ನಡ, 4 ರಂದು ಗಣಿತ, ಶಿಕ್ಷಣ ಶಾಸ್ತ್ರ, 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,7 ರಂದು ಇತಿಹಾಸ, ಭೌತಶಾಸ್ತ್ರ, 9 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, 11 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 13 ರಂದು ಇಂಗ್ಲೀಷ್, 15 ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, 16 ರಂದು ಅರ್ಥಶಾಸ್ತ್ರ,18 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, 20 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, 22 ರಂದು ಹಿಂದಿ ವಿಷಯದ ಪರೀಕ್ಷೆ ನಡೆಯಲಿದೆ.

ಎಲ್ಲ ವಿಷಯಗಳಿಗೆ 80 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10.15 ರಿಂದ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಮೊದಲ ಬಾರಿಗೆ ಪರೀಕ್ಷೆ ಬರೆಯುವವರ ಜೊತೆಗೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

error: Content is protected !!