ಅಯೋಧ್ಯೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಉಗ್ರರ ಕರಿನೆರಳು: ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹತ್ಯೆಗೆ ಸಂಚು: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುವಿನಿಂದ ಬೆದರಿಕೆಯ ಆಡಿಯೋ ಸಂದೇಶ..!

ಉತ್ತರ ಪ್ರದೇಶ : ಇಡೀ ದೇಶವೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ದಿನಕ್ಕಾಗಿ ಕಾತುರದಿಂದ ಕಾಯುತ್ತಿದೆ. ರಾಮ ಭಕ್ತರ ಸಂಭ್ರಮಗಳು ಹೆಚ್ಚಾಗುತ್ತಿದೆ. ಈ ಮಧ್ಯೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಆಡಿಯೋ ಮೂಲಕ ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿದು ಬಂದಿದೆ.

ಅಯೋಧ್ಯೆಯಲ್ಲಿ ಮೂವರು ಶಂಕಿತ ಖಲಿಸ್ತಾನಿಗಳನ್ನು ಯುಪಿ ಎಟಿಎಸ್ ಈಗಾಗಲೇ ಬಂಧಿಸಿದೆ. ಇದನ್ನೆ ಕಾರಣವನ್ನಾಗಿಸಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನಾಶ ಮಾಡುವುದಾಗಿಯೂ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಹೇಳಿದ್ದಾನೆ.

“ಭದ್ರತಾ ಸಂಸ್ಥೆ ತನ್ನ ಮೂವರು ಸಹೋದ್ಯೋಗಿಗಳಿಗೆ ಅನಗತ್ಯ ಕಿರುಕುಳ ನೀಡಬಾರದು. ಆರೋಪಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕುತ್ತಿದ್ದಾರೆ. ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ಯಾರೂ ಉಳಿಸಲು ಸಾಧ್ಯವಿಲ್ಲ. ಜನವರಿ 22ರಂದು ಎಸ್‌ಎಫ್‌ಜೆ ಇದಕ್ಕೆ ಉತ್ತರಿಸುತ್ತದೆ. ಅಂದು ನಾವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ರಾಜಕೀಯವಾಗಿ ಹತ್ಯೆ ಮಾಡುತ್ತೇವೆ” ಎಂದು ಯುಕೆಗೆ ಸೇರಿದ ಫೋನ್  ನಂಬರ್ ವೊಂದರಿಂದ ರೆಕಾರ್ಡಿಂಗ್ ಸಂದೇಶ ಕಳಿಸಿ ಬೆದರಿಕೆಯೊಡ್ಡಿದ್ದಾನೆ.

error: Content is protected !!