ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆಗೆ ಯತ್ನ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸರಕಾರಿ ಕರ್ತವ್ಯದಲ್ಲಿದ್ದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಇಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬAಧ ಇಬ್ಬರೂ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮದಡ್ಕದ ಅಬುಸಾಲಿ ಮಕ್ಕಳಾದ ಆರೋಪಿ ನಿಸಾರ್ ಮತ್ತು ರೌಫ್ ಸಹೋದರರು ಇಬ್ಬರನ್ನು ಜ.24 ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

 

ಘಟನೆಯ ವಿವರ : ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

error: Content is protected !!