ವೇಣೂರು: ಭೀಕರ ಸ್ಟೋಟ ಪ್ರಕರಣ: ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ: ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಿದ್ದ ಮಾಲೀಕ..!

ಬೆಳ್ತಂಗಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ನ ಗೊಳಿಯಂಗಡಿ ಸಮೀಪದ ಕಲ್ಲಾಜೆಯಲ್ಲಿ ಜ.28 ರಂದು ಸಂಜೆ ನಡೆದ ಭೀಕರ ಸ್ಟೋಟದಲ್ಲಿ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ.

ಈ ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಿದ್ದು, ಸದ್ಯ ವೇಣೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಮಹಿಳೆಯೋರ್ವರು ಪ್ರಕರಣ ದಾಖಲಿಸಿದ್ದಾರೆ.

ವೇಣೂರಿನಿಂದ ಪರಾರಿಯಾಗಿದ್ದ ಮಾಲೀಕ ಸೈಯದ್ ಬಶೀರ್ ನನ್ನು ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

error: Content is protected !!