ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ: ಸೆಲ್ಫಿಗಾಗಿ ಮುಗಿಬಿದ್ದ ಭಕ್ತರು..!

ಬೆಳ್ತಂಗಡಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜ.31 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡರು.

ಜ.30 ರಂದು ರಾತ್ರಿ ಮಂಗಳೂರಿನಿಂದ ಧರ್ಮಸ್ಥಳ ಸನ್ನಿಧಿ ವಸತಿಗೃಹಕ್ಕೆ ಆಗಮಿಸಿ ವಾಸ್ತವ್ಯ ಮಾಡಿದ್ದು, ಇಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ಮುಗಿಸಿ ದೇವಸ್ಥಾನದಿಂದ ವಿಜಯೇಂದ್ರ ಅವರು ಹೊರಬರುತ್ತಿದ್ದಂತೆ ಭಕ್ತರು ಸೆಲ್ಫಿಗಾಗಿ ಮುಗಿಬಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳದ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಜೊತೆಗಿದ್ದರು.

error: Content is protected !!