ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ಧರ್ಮಸ್ಥಳ ಭೇಟಿ:

 

 

ಬೆಳ್ತಂಗಡಿ: ಭಾರತೀಯ ಜನತಾ
ಪಾರ್ಟಿಯ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ಯಡಿಯೂರಪ್ಪ ಅವರು  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಅವರು ಜ 30 ರಂದು ಮಂಗಳೂರಿಗೆ ಆಗಮಿಸಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಾತ್ರಿ ಧರ್ಮಸ್ಥಳದ ಸನ್ನಿಧಿ ವಸತಿ ಗೃಹದಲ್ಲಿ ತಂಗಿದ್ದ ಅವರು ಬೆಳಿಗ್ಗೆ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ದ.ಕ.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!