ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗೆ ಶಾಶ್ವತ ಪರಿಹಾರ: ಆರೋಗ್ಯ ಸಚಿವ, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಹಾಳಾಗಿ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿ ಅನೇಕ ಪರಿಹಾರದ ಪ್ರಯತ್ನಗಳು ನಡೆದರು ಹಲವಾರು ಸಮಯ ಯಾವುದೇ ರೀತಿಯಲ್ಲೂ ಸಮಸ್ಯೆ ಬಗೆಹರಿದಿರಲಿಲ್ಲ. ಬಳಿಕ ಮಾಜಿ ಶಾಸಕ ವಸಂತ ಬಂಗೇರರ ಸತತ ಪ್ರಯತ್ನದಿಂದ ಆರೋಗ್ಯ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಘಟಕಕ್ಕೆ ಸೂಕ್ತ ಪಡಿಹಾರ ಸೂಚಿಸಿದ್ದರು. ಅದರಂತೆ ಈಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರ ಅಳವಡಿಕೆಯಾಗಿದೆ. ಈ ಕಾರಣಕ್ಕೆ ಮಾಜಿ ಶಾಸಕ ವಸಂತ ಬಂಗೇರ ಅವರು ಅರೋಗ್ಯ ಸಚಿವ, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಅಭಿನಂದನೆ ತಿಳಿಸಿದ್ದಾರೆ.

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ ಹಿದಾಯತುಲ್ಲ, ಜಿಲ್ಲಾ ಅರೋಗ್ಯಧಿಕಾರಿ ಡಾಟ. ಎಚ್ ಆರ್ ತಿಮ್ಮಯ್ಯರವರುಗಳಿಗೆ ಸಂತ್ರಸ್ತರ ಪರವಾಗಿ ಮತ್ತು ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿರುವುದಾಗಿ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟಕಕ್ಕೆ 4 ಡಯಾಲಿಸಿಸ್ ಯಂತ್ರಗಳು 7 ಸಾವಿರ ಲೀಟರ್ ಸಾಮಥ್ರ್ಯದ ಆರ್ ಓ ಯುನಿಟ್ ಅನ್ನು ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ನ್ಯಾಯವಾದಿ ಬಿ. ಕೆ ಧನಂಜಯ ರಾವ್ ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ರೋಟರಿ ಕ್ಲಬ್ ಇಂದಿರಾನಗರ – ಬೆಂಗಳೂರಿನ ಅಧ್ಯಕ್ಷರಾದ ಬಾಲಕೃಷ್ಣನ್ ಮತ್ತು ಜಗದೀಶ್ ರಾವ್, ಮುಗುಳಿ ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆ ಹೇಳಿದ್ದಾರೆ.

error: Content is protected !!