ಕಾರ್ಕಳ: ಪರಶುರಾಮ ಥೀಂ ಪಾರ್ಕ್ ಕಳಪೆ ಕಾಮಗಾರಿ ಕುರಿತು ದೂರು: ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಿಂದ ಸಿಎಂಗೆ ಮನವಿ: ಸತ್ಯಾಸತ್ಯತೆಯ ಪರಿಶೀಲನೆಯನ್ನು ಸಿ.ಓ.ಡಿಗೆ ವಹಿಸಿದ ಮುಖ್ಯಮಂತ್ರಿ

ಕಾರ್ಕಳ: ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿರುವುದಾಗಿ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗಿರುತ್ತಿರುವ ಬಗ್ಗೆ ಪರ/ವಿರೋಧ ಚರ್ಚೆಗಳು ನಡೆಯುತ್ತಿದ್ದು ಈ ಕುರಿತು ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ಧಾರೆ.


ಫೆ. 02ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಮಗಾರಿಯ ತನಿಖೆಯನ್ನು ಸಿ.ಓ.ಡಿಗೆ ಒಪ್ಪಿಸಿದ್ದಾರೆ. ಜೊತೆಗೆ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳವುಂತೆ ಸೂಚಿಸಿದ್ದಾರೆ.

error: Content is protected !!