ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ:

 

 

ಬೆಳ್ತಂಗಡಿ :ಕರ್ನಾಟಕ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು 2024 ಫೆ 11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಪಿ ಆರ್ ಒ  ಫಾ!ಟೋಮಿ ಕಾಲಿಕಟ್ ಹೇಳಿದರು. ಅವರು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬೆಳಿಗ್ಗೆ 8.45 ಗಂಟೆಗೆ “ವಂದನೆಗಳೊಂದಿಗೆ ಒಮ್ಮನದಿಂ ” ಕೃತಜ್ಞತಾ ದಿವ್ಯಬಲಿಪೂಜಾರ್ಪಣೆ ನಡೆಯಲಿದೆ.‌ಕರ್ನಾಟಕ ಹಾಗೂ ಕೇರಳದಿಂದ ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು, ಅನೇಕ ಧರ್ಮಾಧ್ಯಕ್ಷರುಗಳು, ಧರ್ಮಗುರುಗಳು , ಧರ್ಮಭಗಿನಿಯರು ಹಾಗೂ ಜನರು ದಿವ್ಯ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪೂರ್ವಾಹ್ನ 11 ಗಂಟೆಗೆ ರಜತ ಸಮರೋಪ ಸಮಾರಂಭ ನಡೆಯಲಿದೆ.ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಸಭಾಪತಿಗಳಾದ ಯು.ಟಿ. ಖಾದರ್, ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯ ಸಭಾ ಸದಸ್ಯರು ಡಾ.ಡಿ ವೀರೇಂದ್ರ ಹೆಗ್ಗಡೆ, ಇಂಧನ ಸಚಿವ ಟಿ.ಜೆ. ಜಾರ್ಜ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳು, ಜನಪ್ರತಿನಿಧಿಗಳು, ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ವಿಕಾರ್ ಜನರಲ್ ಫಾ! ಜೋಸ್ ತಲಿಯಪರಂಬಿಲ್,ಮಾಧ್ಯಮ ಪ್ರತಿನಿಧಿ ಫಾ ! ಸುನಿಲ್ ಐಸಕ್ ಉಪಸ್ಥಿತರಿದ್ದರು.

error: Content is protected !!