ಖಾಸಗಿ ಬಸ್‌ಗೆ ಲಾರಿ ಡಿಕ್ಕಿ..!: 7 ಪ್ರಯಾಣಿಕರು ಸಾವು : 15 ಮಂದಿಗೆ ಗಂಭೀರ ಗಾಯ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..!

ಆಂಧ್ರಪ್ರದೇಶ: ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದು 7 ಮಂದಿ ಸಾವನ್ನಪ್ಪಿದ ಘಟನೆ ಫೆ.10 ರಂದು ಆಂಧ್ರಪ್ರದೇಶದ ನೆಲ್ಲೂರಿನ ಕವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ನಸುಕಿನ ಜಾವ ಸಂಭವಿಸಿದೆ.

ಮುಸುನೂರು ಟೋಲ್ ಪ್ಲಾಜಾ ಬಳಿ ಮೊದಲು ನಿಂತ ಲಾರಿಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಬಳಿಕ ಚೆನೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಬಸ್‌ನಲ್ಲಿದ್ದ ಚಾಲಕ ಸಮೇತ 7 ಮಂದಿ ಸಾವನ್ನಪ್ಪಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸದ್ಯ ಅಪಘಾತದ ಸ್ಥಳದಲ್ಲಿ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಅಪಘಾತಕ್ಕೀಡಾದ ವಾಹನಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

error: Content is protected !!