ಸೋಮಂತಡ್ಕ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು :ಓರ್ವ ಸಾವು ಮೂವರಿಗೆ ಗಂಭೀರ ಗಾಯ:

 

 

 

ಬೆಳ್ತಂಗಡಿ:ಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಶೀಟ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಫೆ11 ರಂದು ನಡೆದಿದೆ.

ಮಂಗಳೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಹಾವೇರಿ ಮೂಲದ ಶ್ರೀಧರ್ (43) ಎಂಬವರಿಗೆ ತಲೆ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರಿಗೂ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೇಲ್ನೊಟ್ಟಕ್ಕೆ ಚಾಲಕ ನಿದ್ರೆ ಮಂಪರಿನಲ್ಲಿ ವಾಹನ ಚಲಾಯಿಸಿದರಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಸಂಶಯಿಸಲಾಗಿದೆ.
ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ತೆರಳಿ  ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!