ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಗಡುವು ವಿಸ್ತರಣೆ ಸಾಧ್ಯತೆ: ಸಾರಿಗೆ ಇಲಾಖೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (High Security Registration Plate)ನಂಬರ್ ಪ್ಲೇಟ್ ಅಳವಡಿಕೆಗೆ ಫೆ. 17 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಗಡುವು ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.

ಕೋಟ್ಯಾಂತರ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಬಾಕಿ ಇರುವುದರಿಂದ ಇನ್ನು ಉಳಿದ 5 ದಿನದಲ್ಲಿ ಈ ಕಾರ್ಯ ಸಂಪೂರ್ಣವಾಗಲು ಸಾಧ್ಯವಿಲ್ಲ. ಹೀಗಾಗಿ ದಿನಾಂಕ ವಿಸ್ತರಣೆಗೆ ಒತ್ತಡ ಹೆಚ್ಚಾಗಿದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ “ಈ ಹಿಂದೆಯೂ ದಿನಾಂಕ ವಿಸ್ತರಣೆ ಮಾಡಲಾಗಿತ್ತು. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಸದ್ಯ ಗಡುವು ವಿಸ್ತರಣೆಯ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

error: Content is protected !!