ಲಾಯಿಲ : ಹೃದಯಘಾತದಿಂದ ರಿಕ್ಷಾ ಚಾಲಕ ನಿಧನ..!


ಬೆಳ್ತಂಗಡಿ: ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಫೆ.14ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರದಲ್ಲಿ ನಡೆದಿದೆ.

ರಾಘವೇಂದ್ರ ನಗರ ನಿವಾಸಿ ನಾಗೇಶ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ ಹೃದಯ ನೋವು ಕಾಣಿಸಿದ್ದು ತಕ್ಷಣ ಮನೆಯವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಲವಾರ ವರ್ಷಗಳಿಂದ ಅವರು ರಿಕ್ಷಾ ಚಾಲಕರಾಗಿದ್ದು ಎಲ್ಲರೊಂದಿಗೆ ಆತ್ಮೀಯವಾಗಿ ಇರುತ್ತಿದ್ದರು.

ಮೃತರು ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳು ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

error: Content is protected !!