ಬೆಳ್ತಂಗಡಿ:ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರುಗಳ ಆಶ್ರಯದಲ್ಲಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇವರ ಸಹಕಾರದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ನೆರವೇರಿಸಿ ಸಂತ ಕವಿ ಸರ್ವಜ್ಞ ಒಂದು ಜಾತಿಗೆ ಸೀಮಿತವಲ್ಲ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕು . ಅದಲ್ಲದೇ ಸರ್ಕಾರ ಶಾಲಾ ಪಠ್ಯ ಪುಸ್ತಕಗಳಲ್ಲಿ ಸರ್ವಜ್ಞನ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಪ್ರಕಟಿಸಬೇಕು ಎಂದರು.ವಕೀಲ ಉದಯ ಬಿ.ಕೆ. ಸಂತ ಕವಿ ಸರ್ವಜ್ಞ ಜಯಂತಿ ಆಚರಣೆಯ ಬಗ್ಗೆ ಮಾಹಿತಿ ನೀಡಿದರಲ್ಲದೇ ಸಮಾಜಕ್ಕೆ ಸರ್ವಜ್ಞ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು. ಕುಂಬಾರರ ಸೇವಾ ಸಂಘದ ಉಪಾಧ್ಯಕ್ಷ ಪದ್ಮ ಕುಮಾರ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಉಮೇಶ್ ಕುಲಾಲ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ, ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.