‘370ನೇ ವಿಧಿ ರದ್ದುಪಡಿಸಿದ ನರೇಂದ್ರ ಮೋದಿಯವರಿಗೆ 370 ಸ್ಥಾನಗಳ ಗಿಫ್ಟ್ ಕೊಡಬೇಕು’: ನರೇಂದ್ರ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: 370ನೇ ವಿಧಿ ರದ್ದುಪಡಿಸಿದ ನರೇಂದ್ರ ಮೋದಿಯವರಿಗೆ 370 ಸ್ಥಾನಗಳ ಗಿಫ್ಟ್ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನರೇಂದ್ರ ಗ್ರಾಮದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸಂಸದ ಕ್ರೀಡೋತ್ಸವದ ಕಬ್ಬಡಿ ಪಂದ್ಯ ಉದ್ಘಾಟಿಸಿ ಮಾತನಾಡಿದ ಅವರು, ‘ಹಿಂದೆ ಬೆಂಗಳೂರು, ಹೈದರಾಬಾದ್‍ನಲ್ಲಿ ಬಾಂಬ್ ಹಾರುತ್ತಿದ್ದವು. ಈಗ ಎಲ್ಲಿಯಾದರೂ ಬಾಂಬ್ ಹಾರುತ್ತಿವೆಯಾ? ಪ್ರಸ್ತುತ ಎಲ್ಲಾ ಉಗ್ರ ಚಟುವಟಿಕೆಗಳು ಬಂದ್ ಆಗಿವೆ. ಏಕೆಂದರೆ, ಆರ್ಟಿಕಲ್ 370 ಅನ್ನು ಕಿತ್ತೆಸೆಯಲಾಗಿದೆ. ಮೊದಲು ದೇಶದೊಳಗೆ ಬಂದು ಬಾಂಬ್ ಹಾಕುತ್ತಿದ್ದರು. ಈಗ ನಾವು ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆಯುತ್ತಿದ್ದೇವೆ. ಚೀನಾಗೂ ಎದುರುತ್ತರ ಕೊಡುತ್ತಿದ್ದೇವೆ’, ಇದಕ್ಕೆಲ್ಲ ಮೋದಿಯವರು ಆರ್ಟಿಕಲ್ 370 ತೆಗೆದಿದ್ದೆ ಮೂಲ ಕಾರಣವಾಗಿದೆ. ಇದರಿಂದ ಬಿಜೆಪಿಗೆ 370 ಸ್ಥಾನ ತಾವು ಆರಿಸಿ ಕಳುಹಿಸಬೇಕು. 370ನೇ ವಿಧಿ ರದ್ದುಪಡಿಸಿದ ನರೇಂದ್ರ ಮೋದಿಯವರಿಗೆ 370 ಸ್ಥಾನಗಳ ಗಿಫ್ಟ್ ಕೊಡಬೇಕು ಎಂದಿದ್ದಾರೆ.

error: Content is protected !!