ಕಿರು ಹೈಡ್ರೊ ಎಲೆಕ್ಟ್ರಿಕ್ ಯೋಜನೆಯ ಸಿವಿಲ್ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಗೆ ಸಿಬಿಐ ಶಾಕ್: 100 ಸಿಬಿಐ ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ

ನವದೆಹಲಿ: ಕಿರು ಹೈಡ್ರೊ ಎಲೆಕ್ಟಿçಕ್ ಯೋಜನೆಯ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿದಂತೆ 29 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಫೆ.22ರಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಸೇವೆ ಸಲ್ಲಿಸಿದ ಸತ್ಯ ಪಾಲ್ ಮಲಿಕ್ ಅವರು, 624 ಮೆಗಾವ್ಯಾಟ್‌ಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಮೇಲೆ ಮಲಿಕ್ ಅವರಿಗೆ ಸೇರಿದ 30 ಸ್ಥಳಗಳಲ್ಲಿ ಸುಮಾರು 100 ಸಿಬಿಐ ಅಧಿಕಾರಿಗಳು ಇಂದು ಮುಂಜಾನೆಯಿಂದಲೇ ಶೋಧ ಕಾರ್ಯಾಚರಣೆ ಆರಂಭವಾಗಿದೆ.

ನಡೆಯುತ್ತಿರುವ ತನಿಖೆಯಲ್ಲಿ ತನಿಖಾ ಏಜೆನ್ಸಿ ಸಿಬಿಐ ಕಳೆದ ತಿಂಗಳು ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ನಡೆಸಿತ್ತು. ದಾಳಿಯಲ್ಲಿ 21 ಲಕ್ಷಕ್ಕೂ ಅಧಿಕ ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಆಸ್ತಿ ದಾಖಲೆಗಳು ಮತ್ತು ದೋಷಾರೋಪಣೆ ದಾಖಲೆಗಳನ್ನು ವಶಪಡಿಸಿಕೊಂಡಿದೆ.

error: Content is protected !!