ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಟಿಕೆಟ್ ರೇಸ್ ನಲ್ಲಿ ನಾಲ್ವರು ಆಕಾಂಕ್ಷಿಗಳು..! ಕೈ ಪಕ್ಷಕ್ಕೆ ಯಾರಾಗ್ಬಹುದು ಅದೃಷ್ಟದ ಅಭ್ಯರ್ಥಿ.

 

 

ಮಂಗಳೂರು: ಲೋಕಸಭಾ ಚುನಾವಣೆ ಅಂದ್ರೆ ಬಲಿಷ್ಠಾ ನಾಯಕರ ನಡುವಿನ ಸಮರ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 1989ರಲ್ಲಿ ಗೆಲುವು ಪಡೆದ ಬಳಿಕ ಮತ್ತೆ ಗೆಲುವಿನ ಪತಾಕೆ ಹಾರಿಸಲೇ ಇಲ್ಲ. ಆದರೆ ಈ ಬಾರಿ ಜಯ ಸಾಧಿಸಲು ಹಟಕ್ಕೆ ಬಿದ್ದಿರುವ ಕಾಂಗ್ರೆಸ್ ಅದೃಷ್ಟದ ಅಭ್ಯರ್ಥಿಯನ್ನಾಗಿ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಕುತೂಹಲ. ಸದ್ಯ ಟಿಕೆಟ್ ರೇಸ್ ನಲ್ಲಿ ನಾಲ್ಕು ಮಂದಿ  ಆಕಾಂಕ್ಷಿಗಳ ಹೆಸರು ಜೋರಾಗಿದೆ.

 

                        ರಮಾನಾಥ ರೈ

ನಿರಂತರ 8 ಬಾರಿ ಸೋಲಿನ ಕಹಿ ಅನುಭವಿಸಿದ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಕಣಕ್ಕಿಳಿಯಲು ಮಾಜಿ ಸಚಿವ ಬಿ ರಮಾನಾಥ ರೈ, ಹರೀಶ್ ಕುಮಾರ್, ವಿನಯಕುಮಾರ್ ಸೊರಕೆ, ಪದ್ಮರಾಜ್ ನಿರ್ಧರಿಸಿದ್ದಾರೆ. ಇವರೇ ಸದ್ಯದ ಟಿಕೆಟ್‌ಗಾಗಿ ಆಕಾಂಕ್ಷಿಗಳು ಎಂಬ ಮಾಹಿತಿ ಕೇಳಿ ಬರುತ್ತಿದೆ.

 

                   ಹರೀಶ್ ಕುಮಾರ್

 

1952 ರಿಂದ 1989ರ ತನಕ ಮಂಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು.. 1991ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಬಳಿಕ ಬಿಜೆಪಿ ಬಲಿಷ್ಠವಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿತು. ಆ ಬಳಿಕ ನಡೆದ ಯಾವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿಲ್ಲ. ಈಗ ಬಿಜೆಪಿ ಭದ್ರಕೋಟೆಯಾಗಿರುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಲು ರಮಾನಾಥ ರೈ ಆಸಕ್ತಿ ವ್ಯಕ್ತಪಡಿಸಿದ್ದಾರೆ.

 

           ವಿನಯ್ ಕುಮಾರ್ ಸೊರಕೆ

 

ರಮಾನಾಥ ರೈ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 9 ಬಾರಿ ಸ್ಪರ್ಧಿಸಿ, ಗೆದ್ದು, ಸಚಿವರೂ ಆಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರಾದ ಇವರು ಕಾಂಗ್ರೆಸ್ ಪಕ್ಷದ ಕಟ್ಟಾಳು ನಾಯಕ ಕೂಡ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡ ಅವರು ಇದೀಗ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

 

                          ಪದ್ಮರಾಜ್

 

ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರೂ ಕೂಡ ಒಬ್ಬ ಕಾಂಗ್ರೆಸ್ ನ ಟಿಕೆಟ್ ಆಕಾಂಕ್ಷಿ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅವರು, ಅಲ್ಲಿನ ಸೋಲಿನ ಬಳಿಕ ಉಡುಪಿ ಜಿಲ್ಲೆಗೆ ಹೋಗಿ ಉಡುಪಿಯಲ್ಲಿ ಸಂಸದರಾಗಿದ್ದರು. ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಈ ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ.

ಚುನಾವಣಾ ರಾಜಕೀಯಕ್ಕೆ ಹೊಸದಾಗಿ ಪ್ರವೇಶ ಪಡೆಯುತ್ತಿರುವವರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ . ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಅವರ ಆಪ್ತರಾಗಿರುವ ಪದ್ಮರಾಜ್ ಕಳೆದ ವಿಧಾನಸಭಾ ಚುನಾವಣೆಯ ವೇಳೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸಕ್ತರಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಸದ್ಯ ಇವರೂ ಕೂಡ ಟಿಕೆಟ್ ರೇಸ್ ನಲ್ಲಿರೂ ಆಕಾಂಕ್ಷಿ.
ವಿಧಾನ ಪರಿಷತ್ ಸದಸ್ಯರಾಗಿರುವ ಹರೀಶ್ ಕುಮಾರ್ ಅವರು ಕೂಡ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಇವರೂ ಒಬ್ಬರು.ಅದರೆ ಹೈಕಮಾಂಡ್ ಕೊನೆಗೆ ಬೇರೆ ಯಾರಾದರೂ ಹೊಸ ಅಭ್ಯರ್ಥಿಯನ್ನು ಆಯ್ಕೆಗೊಳಿಸಿದರೂ ಅಚ್ಚರಿ ಪಡಬೇಕಾಗಿಲ್ಲ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕಾಗಿದೆ.

error: Content is protected !!