ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆ : ಅಲಹಾಬಾದ್ ಕೋರ್ಟ್ ನಿಂದ ಇಂದು ಮಹತ್ವದ ತೀರ್ಪು

ಪ್ರಯಾಗ್‌ರಾಜ್: ಕಾಶಿ ವಿಶ್ವನಾಥನ ಹಳೆಯ ದೇಗುಲ ಎಂದೇ ಹೇಳಲಾಗುವ ಜ್ಞಾನವಾಪಿ ಮಸೀದಿಯೊಳಗಿನ ನೆಲಮಾಳಿಗೆಯಲ್ಲಿ ಹಿಂದೂಗಳು ಸಲ್ಲಿಸುತ್ತಿರುವ ಪೂಜೆಯನ್ನು ನಿಲ್ಲಿಸಬೇಕು ಎಂದು ಕೋರಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಸಲ್ಲಿಸಿರುವ ತಕರಾರು ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು (ಫೆ.26 )ತೀರ್ಪು ನೀಡಲಿದೆ.

ವಾರಾಣಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿಯಲ್ಲಿನ ವ್ಯಾಸ್ ತೆಹಖಾನಾದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು. ಹೀಗಾಗಿ ತೆಹಖಾನಾದಲ್ಲಿ ನಿತ್ಯ ಪೂಜೆ ನಡೆಯುತ್ತಿದೆ. ಆದರೆ, ಇದು ಮಸೀದಿ ಜಾಗವಾಗಿದ್ದು, ಪೂಜೆಗೆ ಅವಕಾಶ ನೀಡಬಾರದು ಎಂದು ಕೋರಿ ಮುಸ್ಲಿಂ ಪಕ್ಷದವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್, ವಾದ ಪ್ರತಿವಾದ ಆಲಿಸಿ ಫೆಬ್ರವರಿ 26 ರಂದು ಅಂತಿಮ ತೀರ್ಪು ನೀಡಲಾಗುವುದು ಎಂದು ಹೇಳಿತ್ತು. ಹೀಗಾಗಿ ಇಂದು ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್ ಅವರಿರುವ ಪೀಠ ಇಂದು ತೀರ್ಪು ಪ್ರಕಟಿಸಲಿದ್ದಾರೆ.

error: Content is protected !!