ಲೋಕಸಭೆ ಚುನಾವಣೆ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ:

 

 

 

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಇವರು ಕಣಕ್ಕಿಳಿದಿದ್ದರು. ಲೋಕಸಭಾ ಚುನಾವಣೆಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮತ್ತೆ ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದರು. ಆದರೆ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಸೂಚಿಸಲಾಗಿತ್ತು. ಆದ್ದರಿಂದ ಮಾತುಕತೆ ವಿಫಲವಾಗಿ ಪಕ್ಷೇತರನಾಗಿ ಸ್ಪರ್ಧಿಸಲು ಪುತ್ತಿಲ ತೀರ್ಮಾನಿಸಿದ್ದಾರೆ.ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸುದ್ಧಿಗೋಷ್ಠಿ ನಡೆಸಿ, “ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿಯಲಿದ್ದಾರೆ” ಎಂದು ತಿಳಿಸಿದ್ದಾರೆ.

error: Content is protected !!