ಬೆಳ್ತಂಗಡಿ:ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಉತ್ತಮ ರೀತಿಯಲ್ಲಿ ತಲುಪುತಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಗ್ಯಾರಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಅವರು ಮಾ 01ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ಧೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾರ್ಚ್ 05 ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬೆಳಿಗ್ಗೆ 10. 30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ,ಜಿಲ್ಲೆಯ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.ಸ್ಥಳದಲ್ಲೇ ಅರ್ಜಿ ವಿಲೇವಾರಿ ಕೂಡ ನಡೆಯಲಿದೆ. ಅದಲ್ಲದೇ ಬೆಳ್ತಂಗಡಿ ತಾಲೂಕಿನ ಸುಮಾರು 135 ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವೂ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ಹಕೀಂ ಕೊಕ್ಕಡ, ಯುವ ನಗರ ಸಮಿತಿಯ ಸುದರ್ಶನ್ ಶೆಟ್ಟಿ ಆರಂಬೋಡಿ ಉಪಸ್ಥಿತರಿದ್ದರು.