ಕಡಬ: ಕಾಲೇಜ್ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕಡಬ: ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾ.04ರಂದು ಬೆಳಗ್ಗೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರು ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಮುಸುಕುದಾರಿ ಯುವಕನೋರ್ವ ಬಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆರೋಪಿಯು ಕೇರಳ ಮೂಲದವ ಎಂಬ ಶಂಕೆ ವ್ಯಕ್ತವಾಗಿದೆ.

error: Content is protected !!