ಮಾ.8 ಮಹಾಶಿವರಾತ್ರಿ: ಊರಿಗೆ ತೆರಳುವವರಿಗೆ ಗುಡ್ ನ್ಯೂಸ್: ರಾಜ್ಯ ಸರಕಾರದಿಂದ 1500 ವಿಶೇಷ ಕೆಎಸ್​ಆರ್​ಟಿಸಿ ಬಸ್​ ವ್ಯವಸ್ಥೆ

ಬೆಂಗಳೂರು: ಈ ಬಾರಿಯ ಮಹಾಶಿವರಾತ್ರಿ ಭಕ್ತರಿಗೆ ಭರ್ಜರಿ ರಜೆ ಸಿಗುವಂತೆ ಮಾಡಿದೆ. ಮಾ.‌08 ರಂದು ಮಹಾಶಿವರಾತ್ರಿ ಹಬ್ಬವಿದ್ದು 9 ಮತ್ತು 10 ವಾರಾಂತ್ಯ ದಿನಗಳಾಗಿದೆ. ಈ ಹಿನ್ನೆಲೆ ಊರಿಗೆ ತೆರಳುವವರಿಗೆ ಅನುಕೂಲವಾಗುವಂತೆ ಸರಕಾರ ಹೆಚ್ಚುವರಿ‌ 1,500 ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಿದೆ. ಅಲ್ಲದೆ ಹಬ್ಬ ಮುಗಿಸಿ ವಾಪಸಾಗುವವರಿಗೂ ಬಸ್ ವ್ಯವಸ್ಥೆ ಒದಗಿಸಲಾಗುತ್ತಿದೆ.

ಮಾ.07 ರಿಂದ 1ಮಾ.‌10ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಹಾಗೂ ಊರಿಂದ ಮರಳಿವವರಿಗೂ ಈ ಬಸ್ ಸೌಲಭ್ಯ ನೀಡಲಾಗಿದೆ.

ಕೆಂಪೇಗೌಡ ಬಸ್​ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್​ ಮುಂತಾದ ಸ್ಥಳಗಳಿಗೆ ವಿಶೇಷ ಬಸ್​ಗಳನ್ನು ಒದಗಿಸಲಾಗುತ್ತದೆ.

ಮೈಸೂರು ಬಸ್​ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್​ಗಳು ತೆರಳಲಿವೆ.ತಮಿಳುನಾಡು ಮತ್ತು ಕೇರಳ ಕಡೆಗೆ , ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಒದಗಿಸಲಾಗುತ್ತದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್​ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ಸಂಸ್ಥೆ ಕೋರಿದೆ

ಇ-ಟಿಕೆಟ್​ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಮಾಡಬಹುದಾಗಿದೆ.‌

error: Content is protected !!