ಉಜಿರೆ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಮೂವರು ಆರೋಪಿಗಳು ವಶಕ್ಕೆ

ಬೆಳ್ತಂಗಡಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಪುರ್ ಮಠ್ ನೇತೃತ್ವದ ಪೊಲೀಸರ ತಂಡ ಮಾ.06ರಂದು ಲಾಡ್ಜ್ ಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಉಜಿರೆಯ ವಿವಿಧ ಲಾಡ್ಜ್ ಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳಾದ ತುಮಕೂರಿನ ರೇಣುಕಾ ಪ್ರಸಾದ್ (29) ಕಾರ್ಕಳದ ರಾಜೇಶ್ ಮೋಹನ್ ನಾಯರ್ (34) ಹಾಗೂ ನಿತಿನ್ ಕುಮಾರ್,(28) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣದ ನೊಂದ ಮಹಿಳೆಯನ್ನು ರಕ್ಷಿಸಿದ್ದಾರೆ, ಆರೋಪಿಗಳ ವಿರುದ್ಧ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

error: Content is protected !!