ಇಳಂತಿಲ, ಶಾಲಾ ಕೊಠಡಿ ಬೀಗ ಮುರಿದು ಹಣ ಕಳ್ಳತನ:

 

 

ಬೆಳ್ತಂಗಡಿ; ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಶಾಲೆಯ ಕಪಾಟಿ ನಲ್ಲಿ ಇಟ್ಟಿದ್ದ ಹಣವನ್ನು ಕಳ್ಳತನ‌ ಮಾಡಿದ ಘಟನೆ ಇಳಂತಿಲದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಗುರುವಾರ ಬೆಳಿಗ್ಗೆ ಶಾಲೆಗೆ ಬಂದು ನೋಡಿದಾಗ ಶಾಲೆಯ ಕಛೇರಿ ಕೊಠಡಿಯ ಬಾಗಿಲಿನ‌ ಬೀಗ ಮುರಿದು ಕಳ್ಳರು ಒಳನುಗ್ಗಿರುವುದು ಕಂಡು ಬಂದಿದೆ. ಒಳಗೆ ನೋಡಿದಾಗ ಕಪಾಟಿನ ಬೀಗ ಒಡೆದಿದ್ದು ಅದರಲ್ಲಿ ಇರಿಸಲಾಗಿದ್ದ ರೂ 1,500 ಹಣವನ್ನು ಕಳವು ಮಾಡಿರುವುದು ಕಂಡು ಬಂದಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!