ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಕಡಿತ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 100 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಹಿಳಾ ಸಬಲೀಕರಣ ಮತ್ತು ಸುಲಭ ಜೀವನ ವಿಧಾನವನ್ನು ಒದಗಿಸುವ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದರಿಂದ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಇದು ನಮ್ಮ ನಾರಿ ಶಕ್ತಿಗೆ ಪ್ರಯೋಜನ ನೀಡುತ್ತದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್‌ಗೆ 905.50 ರೂ. ದರ ಇದೆ. ಇದು ಸಾಮಾನ್ಯ ಗ್ರಾಹಕರಿಗೆ ಅನ್ವಯವಾಗುವ ದರವಾಗಿದೆ. ಶುಕ್ರವಾರದ 100 ರೂ. ಕಡಿತದ ಘೋಷಣೆ ಬಳಿಕ ಇದೀಗ ದರ 805.50 ರೂ.ಗೆ ಇಳಿಕೆಯಾಗಲಿದೆ.

error: Content is protected !!