ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

ಬೆಳ್ತಂಗಡಿ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರಸ್ತುತ ಸದಸ್ಯರಾದ ಬೇಬಿ ಸುವರ್ಣ ಮಾಲಾಡಿ, ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಸುಮತಿ ಶೆಟ್ಟಿ ಕಣಿಯೂರು, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾಮ್ ದೇವ ರಾವ್ ಮುಂಡಾಜೆ, ಶಿರ್ಲಾಲು ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಜೈನ್, ಪಡಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೆಲ್ವಿನ್ ಸಿಕ್ವೆರಾ ಗರ್ಡಾಡಿ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

error: Content is protected !!