ಧರ್ಮಸ್ಥಳ: ಶಿವರಾತ್ರಿಯಂದೇ ಶಿವನ ಪಾದ ಸೇರಿದ ಲತಾ ಆನೆ: ಕಳೆದ 50 ವರ್ಷಗಳಿಂದ ಶ್ರೀ ಕ್ಷೇತ್ರದಲ್ಲಿ ಸೇವೆ

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥ ದೇವರಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಮಾ.08 ಮಹಾಶಿವರಾತ್ರಿಯಂದೇ ಇಹಲೋಕ ತ್ಯಜಿಸಿದೆ.

60 ವರ್ಷ ಪ್ರಾಯವಾಗಿರುವ ಲತಾ ಆನೆ ಧರ್ಮಸ್ಥಳ ಕ್ಷೇತ್ರದ ಜಾತ್ರೋತ್ಸವ, ಲಕ್ಷದೀಪೋತ್ಸವ, ನಡಾವಳಿ, ಶಿವರಾತ್ರಿ ಉತ್ಸವ ಹೀಗೆ ಎಲ್ಲ ಉತ್ಸವದಲ್ಲೂ ಪಾಲ್ಗೊಂಡು ಸೇವೆ ಸಲ್ಲಿಸುತ್ತಿದ್ದಳು. ಆದರೆ ನಿನ್ನೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ


ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಧರ್ಮಸ್ಥಳದ ಪಶುವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

error: Content is protected !!