ಹೆಚ್ಚಾದ ಬಿಸಿಲಿನ ತಾಪ,ಕುಡಿಯುವ ನೀರು ಸೇರಿದಂತೆ ಮೇವು ಸಮಸ್ಯೆ ಬಗ್ಗೆ ಚರ್ಚೆ: ವಿವಿಧ ಇಲಾಖಾಧಿಕಾರಿಗಳ ತುರ್ತುಸಭೆ ಕರೆದ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ: ಕಂಡು ಕೇಳರಿಯದ ರೀತಿಯಲ್ಲಿ ಈ ಬಾರಿ ಬಿಸಿಲಿನ ಬೇಗೆ ದಿನದಿಂದ ದಿನ ಹೆಚ್ಚಾಗುತಿದ್ದು ತಾಲೂಕಿನಾದ್ಯಂತ ಅಂತರ್ಜಲ ಸೇರಿದಂತೆ ನೀರಿನ ಮಟ್ಟ ಕುಸಿಯತೊಡಗಿದ್ದು ಜನರಲ್ಲಿ ಆತಂಕ ಮೂಡುವಂತಾಗಿದೆ.ಈ ಬಗ್ಗೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಬಗ್ಗೆ ಚರ್ಚಿಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಾ 11 ಸೋಮವಾರ ಬೆಳಿಗ್ಗೆ 11.30 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತುರ್ತು ಸಭೆ ನಡೆಯಲಿದೆ. ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!