ಕುತ್ತಾರು : ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ: ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

ಉಳ್ಳಾಲ: ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ನಟರು ಮಾ.10ರಂದು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕೊರಗಜ್ಜನ ದರ್ಶನದ ಬಳಿಕ ಮಾತನಾಡಿದ ನಟ ದರ್ಶನ್, “ಮಂಗಳೂರಿಗೆ ಹಲವು ಬಾರಿ ಬಂದಿದ್ದೇನೆ. ಆದರೆ ಕುತ್ತಾರಿಗೆ ಭೇಟಿ ಕೊಡಲು ಆಗಿರಲಿಲ್ಲ. ಹಲವರು ಈ ಕ್ಷೇತ್ರದ ಬಗ್ಗೆ ಹೇಳಿದ್ದರು. ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ. ನಾನು ಭೇಟಿ ನೀಡಿರುವುದಕ್ಕೆ ಯಾವುದೇ ನಿಖರ ಕಾರಣಗಳಿಲ್ಲ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹಾಸ್ಯ ನಟ ಚಿಕ್ಕಣ್ಣ, ಪ್ರಶಾಂತ್ ಮಾರ್ಲ, ಮಹಾಬಲ ಶೆಟ್ಟಿ , ವಿದ್ಯಾಚರಣ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಪ್ರೀತಮ್ ಶೆಟ್ಟಿ ಹಾಗೂ ಕೊರಗಜ್ಜ ಆದಿಸ್ಥಳ ದೆಕ್ಕಾಡುವಿನ ಟ್ರಸ್ಟಿಗಳು ಜೊತೆಗಿದ್ದರು.

ಭಾನುವಾರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಅಜ್ಜನ ದರ್ಶನಕ್ಕೆ ಆಗಮಿಸಿದ್ದು, ‘ಡಿಬಾಸ್’ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದಲ್ಲಿ ಜೊತೆಗಿದ್ದ ಅಂಗರಕ್ಷಕರು ಅಭಿಮಾನಿಗಳ ಕಾಲರ್ ಹಿಡಿದು ತಳ್ಳಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

error: Content is protected !!