ಬೆಳ್ತಂಗಡಿ: ಲೋಕಸಭಾ ಚುನಾವಣೆ-2024ರ ಹಿನ್ನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಹೋರ್ಡಿಂಗ್ಸ್, ಬೋರ್ಡಿಂಗ್ಸ್ ಅಳವಡಿಸಿರುವುದನ್ನು ತೆರವುಗೊಳಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಾಲೂಕಿನ ಎಲ್ಲಾ ಪಂಚಾಯತ್ ಗಳಿಗೆ ಸೂಚನೆ ನೀಡಿದ್ದಾರೆ.
ನೀತಿ ಸಂಹಿತೆ ಘೋಷಣೆಯಾದ ತಕ್ಷಣದಿಂದಲೇ ಅಥವ ನೀತಿ ಸಂಹಿತೆ ಜಾರಿಯಾಗುವವರೆಗೆ ಕಾಯದೆ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಅನಗತ್ಯವಾಗಿ ಹಾಗೂ ಅನುಮತಿ ಇಲ್ಲದೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್,ಬಂಟಿಂಗ್ಸ್, ಹೋರ್ಡಿಂಗ್ಸ್, ಬೋರ್ಡಿಂಗ್ಸ್ ಇತ್ಯಾದಿಗಳನ್ನು ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 12 ಗಂಟೆಯೊಳಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕು ಎಂದು ಸೂಚಿಸಿದೆ.