ತಾಲೂಕಿನಾದ್ಯಂತ ನೀರಿನ ಸಮಸ್ಯೆ:ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ: 8 ಬಾರಿ ನೊಟೀಸ್ ನೀಡಿದರೂ ಸ್ಪಂದಿಸದ ಗುತ್ತಿಗೆದಾರ, ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ:

 

 

 

ಬೆಳ್ತಂಗಡಿ:ತಾಲೂಕಿನ ವಿವಿಧ ಪಂಚಾಯತ್ ಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು  ಈ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳನ್ನೊಳಗೊಂಡ  ತುರ್ತು ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು  ನಡೆಯಿತು.ಈ ವೇಳೆ ವಿವಿಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮದ ನೀರಿನ ಸಮಸ್ಯೆಯ ಬಗ್ಗೆ ವಿವರಿಸಿ ಜೆಜೆಎಂ ಯೋಜನೆಯಲ್ಲಿ ಕೊಳವೆಬಾವಿ ಕೊರೆಯಿಸಿದ್ದರೂ ವಿದ್ಯುತ್ ಟಿಸಿ ಅಳವಡಿಕೆ ಲೋ ವೋಲ್ಟೆಜ್ ಸಮಸ್ಯೆಯಿಂದ   ನೀರು ಸರಬರಾಜು ಮಾಡಲು ಸಮಸ್ಯೆಯಾಗುತ್ತಿದೆ ಎಂದು ಮಾಹಿತಿ ನೀಡಿದರು.ಈ ಬಗ್ಗೆ ಜೆಜೆಎಂ ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು. ಮಾಲಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಜೆಜೆಎಂ ಕೆಲಸ ಅಪೂರ್ಣಗೊಂಡಿರುವುದರಿಂದ ನೀರು ಸರಬರಾಜು ಮಾಡಲು  ಸಮಸ್ಯೆಯಾಗುತ್ತಿದೆ . ಮಾಲಾಡಿ ಪರಿಸರದಲ್ಲಿ ಜೆಜೆಎಂ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಸತತ ಎಂಟು ಬಾರಿ ನೋಟಿಸ್ ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ಜೆಜೆಎಂ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದಾಗ ಈ ಬಗ್ಗೆ ತಕ್ಷಣ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚಾಯತ್ ಪೈಪ್ ಲೈನ್ ಕಾಮಗಾರಿ ವೇಳೆ  ತುಂಡಾಗಿ ತಕ್ಷಣ ದುರಸ್ತಿ ಆಗದಿರುವುದರಿಂದ ನೀರು ಸರಬರಾಜು ಮಾಡಲು ಮತ್ತಷ್ಟು ತೊಂದರೆಯಾಗುತ್ತಿದೆ ಎಂದು ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ತಿಳಿಸಿದಾಗ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಎಲ್ಲ ಪಂಚಾಯತ್ ಗಳ ಪಿಡಿಒ ಪಂಚಾಯತ್ ,ಅಧ್ಯಕ್ಷರುಗಳು ಹಾಗೂ ಹೆದ್ದಾರಿ ಅಧಿಕಾರಿಗಳ ಸಭೆಯನ್ನು ಎರಡು ದಿನಗಳಲ್ಲಿ   ತಕ್ಷಣ ಸಭೆ ಕರೆದು ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಕಾರ್ಯಪಾಲಕ ಅಭಿಯಂತರ ನಿತೀನ್ ಉಪಸ್ಥಿತರಿದ್ದರು.

error: Content is protected !!