ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್: ಐವರು ಸಾವು, 11ಕ್ಕೂ ಹೆಚ್ಚು ಜನರಿಗೆ ಗಾಯ: ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಧ್ಯಪ್ರದೇಶ: ವೇಗವಾಗಿ ಬಂದ ಟ್ರಕ್‌ವೊಂದು ಮದುವೆ ಮೆರವಣಿಗೆ ಮೇಲೆ ಹರಿದು ಐವರು ಸಾವನ್ನಪ್ಪಿದ ಘಟನೆ ರೈಸನ್ ಜಿಲ್ಲೆಯ ಘಾಟ್ ಪಿಪಾರಿಯಾ ಗ್ರಾಮದಲ್ಲಿ ನಡೆದಿದೆ.

ಹೋಶಂಗಾಬಾದ್‍ನಿಂದ ರೈಸನ್‌ನ ಪಿಪಾರಿಯಾ ಗ್ರಾಮಕ್ಕೆ ಮದುವೆ ಮೆರವಣಿಗೆ ಬಂದಿದ್ದ ಸಂದರ್ಭ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮದುವೆ ಮೆರವಣಿಗೆ ಮೇಲೆ ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆಯಲ್ಲಿ ನಿರತರಾಗಿದ್ದಾರೆ. ರೈಸನ್‌ನಲ್ಲಿ ನಡೆದ ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಕ್ಕೆ ತಲಾ 4 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಧನಸಹಾಯ ಘೋಷಿಸಲಾಗಿದೆ

error: Content is protected !!