ಲೋಕಸಭಾ ಚುನಾವಣೆ – 2024 : 2 ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡ ಪ್ರಧಾನಿ


ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು 2 ದಿನ ಕರ್ನಾಟಕ ರಾಜ್ಯ ಪ್ರವಾಸ ನಡೆಸಲಿದ್ದಾರೆ.

ಮಾ.16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಕಲಬುರಗಿಗೆ ಭೇಟಿ ಕೊಡಲಿದ್ದು, ಎನ್ ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಾ 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನಲೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

error: Content is protected !!