ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ.:ಬಿಜೆಪಿಗೆ ಮತ್ತಷ್ಟು ಬಲ ತುಂಬಿದ ಪುತ್ತಿಲ‌ ಪರಿವಾರ:

 

 

 

 

ಬೆಂಗಳೂರು: ಪುತ್ತಿಲ‌ ಪರಿವಾರದ ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನಲ್ಲಿ ರಾಜ್ಯಾದ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇವರು ಇತ್ತೀಚೆಗೆ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೆಚ್ಚಿನ ಮತವನ್ನು ಪಡೆದು ಕೆಲವೇ ಅಂತರದಲ್ಲಿ ಅಶೋಕ್ ರೈ ಎದುರು ಸೋಲನ್ನು ಅನುಭವಿಸಿದರು. ನಂತರ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಹಲವಾರು ಗೆದ್ದು ಇತಿಹಾಸವನ್ನು ನಿರ್ಮಿಸಿದ್ದರು. ಎರಡು ತಿಂಗಳ ಹಿಂದೆ ರಾಜ್ಯಾಧ್ಯಕ್ಷರು ಇವರ ಜೊತೆ ಬಿಜೆಪಿ ಸೇರ್ಪಡೆಯ ಬಗ್ಗೆ ಮಾತುಕತೆಯನ್ನು ಮಾಡಿದ್ದರು ಆದರೂ ಇದನ್ನು ಇವರು ತಿರಸ್ಕರಿಸಿದ್ದರು.

ಇನ್ನು ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ತನ್ನ ಸಂಪೂರ್ಣವಾದ ಬೆಂಬಲವನ್ನು ಸೂಚಿಸಿದ್ದು ದೊಡ್ಡ ಅಂತರದಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!