ಲೋಕಸಭೆ ಚುನಾವಣೆ -2024: ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ: ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ಫಿಕ್ಸ್..?

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದು ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಿದೆ. ಆದರೆ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ಪದ್ಮರಾಜ್ ಆರ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಬಹಳಷ್ಟಿದೆ. ಶ್ರೀ ಕ್ಷೇತ್ರ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಸಾಲ ಮೇಳದ ರೂವಾರಿ ಜನಾರ್ಧನ ಪೂಜಾರಿ ಆಪ್ತ ಆಗಿರುವ ಇವರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ ಅವರ ಹೆಸರು ಫೈನಲ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!