ಅಡ್ಯನಡ್ಕ : ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ: ಮೂವರು ಅಂತರಾಜ್ಯ ಕಳ್ಳರ ಬಂಧನ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ತಂಡಕ್ಕೆ ನಗದು ಬಹುಮಾನ ಘೋಷಣೆ

ಬಂಟ್ವಾಳ: ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಿAದ ಹಣ, ಬೆಳ್ಳಿ, ಚಿನ್ನ ಕದ್ದ ಖದೀಮರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಫೆ.07ರಂದು ರಾತ್ರಿ ಬ್ಯಾಂಕಿನ ಸ್ಟ್ರಾಂಗ್ ರೂಮಿನ ಬಾಗಿಲನ್ನು ತುಂಡರಿಸಿ ಒಳ ಪ್ರವೇಶಿಸಿ 17,28,735 ರೂ ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,00ರೂ ಮೌಲ್ಯದ ಬೆಳ್ಳಿ ಕಳ್ಳತನ ಮಾಡಿದ್ದರು. ಈ ಬಗ್ಗೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಫೆ.10ರಂದು ಮೂವರು ಖತರ್ ನಾಕ್ ಕಳ್ಳರನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಬಿಮೂಡಾ ಗ್ರಾಮದ ಮಹಮ್ಮದ್ ರಫೀಕ್ (35), ಮಂಜೇಶ್ವರದ ಮೊಗ್ರಾಳ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಗ್ರಾಮದ ಗಾಳಿಯಡ್ಕ ನಿವಾಸಿ ದಯಾನಂದ ಎಸ್ (37) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2,40,700/- ರೂ ನಗದು , ಕಳ್ಳತನದ ಹಣದಿಂದ ಖರೀದಿಸಿದ ಗೃಹಉಪಯೋಗಿ ಸಾಮಗ್ರಿ, 4,40,700/- ಹಾಗೂ ರೂ 12,48,218/-ರೂ ಮೌಲ್ಯದ ಚಿನ್ನಾಭರಣ, ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಕೆಎ-01-ಎನ್‌ಜಿ-2227ನೇ ನೊಂದಣಿ ಸಂಖ್ಯೆಯ ಬ್ರೀಝಾ ಕಾರು -01 ಗ್ಯಾಸ್ ಕಟರ್ ಹಾಗೂ ಇತರೆ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ- 25,70,918/- ರೂ ಎಂದು ಅಂದಾಜಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕುಖ್ಯಾತ ಕಳ್ಳರ ಮೇಲೆ ದಾಖಲಾದ ಪ್ರಕರಣಗಳ ವಿವರ:


ಆರೋಪಿ ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ಎಂಬಾತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ -02, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ -02, ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ -01, ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ -04, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01 , ಬೆಂಗಳೂರು ನಗರದ ವ್ಯಾಪ್ತಿಯಲ್ಲಿ -06 , ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಡುಪಿ ಜಿಲ್ಲೆಯಲ್ಲಿ-03, ವಿಟ್ಲ ಪೊಲೀಸ್ ಠಾಣೆಯಲ್ಲಿ -01 ಒಟ್ಟು 23 ಪ್ರಕರಣಗಳು ದಾಖಲಾಗಿದೆ.

ಆರೋಪಿ ಇಬ್ರಾಹಿಂ ಕಲಂದರ್ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ 02, ವಿಟ್ಲ ಪೊಲೀಸ್ ಠಾಣೆಯಲ್ಲಿ 03, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 01, ಮೂಡಬಿದ್ರೆ ಠಾಣೆಯಲ್ಲಿ 01 ಕೇರಳ ರಾಜ್ಯದ ಕುಂಬ್ಳೆ ಪೊಲೀಸ್ ಠಾಣೆಯಲ್ಲಿ-01 ಒಟ್ಟು-08 ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿ ದಯಾನಂದ ಎಸ್. ವಿಟ್ಲ ಪೊಲೀಸ್ ಠಾಣೆಯಲ್ಲಿ-01 ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರು

ಆರೋಪಿಗಳ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಸಿ ಬಿ ರಿಷ್ಯಂತ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎನ್ ಎಂ ಹಾಗೂ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಈ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್, ಉದಯರವಿ, ಹರೀಶ್ ಕುಮಾರ್, ವಿದ್ಯಾ ಕೆ.ಜೆ. ಸಿಬ್ಬಂಧಿಗಳಾದ ವೆಂಕಟರಮಣ ಗೌಡ, ಪ್ರವೀಣ್ ಮೂರುಗೋಳಿ, ಉದಯ ರೈ, ರಕ್ಷೀತ್ ರೈ , ಪ್ರವೀಣ್ ರೈ ಪಾಲ್ತಾಡಿ, ಅದ್ರಾಮ, ಕರುಣಾಕರ, ರಾಹುಲ್ ರಾವ್, ಶ್ರೀಧರ ಸಿ ಎಸ್, ಜಗದೀಶ್ ಅತ್ತಾಜೆ, ಹೇಮರಾಜ್, ಅಶೋಕ್, ವಿವೇಕ್ ಕೆ., ಕುಮಾರ್ ಹೆಚ್.ಕೆ. , ಸಂಪತ್, ದಿವಾಕರ್, ಸಂತೋಷ್ ,ಕುಮಾರ್ ಮಾಯಪ್ಪರವರು ಭಾಗಿಯಾಗಿದ್ದರು.

ಸದ್ರಿ ತಂಡಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿದ್ದಾರೆ.

error: Content is protected !!