ಮಾ.16ರಂದು ಲೋಕಸಭೆ ಚುನಾವಣಾ ದಿನಾಂಕ ಘೋಷಣೆ: ಚುನಾವಣಾ ಆಯೋಗದ ನೂತನ ಆಯುಕ್ತರಿಂದ ನಾಳೆ ಪತ್ರಿಕಾಗೋಷ್ಠಿ

ದೆಹಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಮಧ್ಯಾಹ್ನ 1:30ರ ನಂತರ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದು, ಇಂದು ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

error: Content is protected !!