‘ಹತ್ತಾರು ಯೋಜನೆಗಳ ಯಶಸ್ಸಿಗೆ ನಿಮ್ಮ ನಂಬಿಕೆಯೇ ಕಾರಣ’: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ: 370ನೇ ವಿಧಿ ರದ್ದು, ಜಿಎಸ್‌ಟಿ ಬಗ್ಗೆ ಪ್ರಸ್ತಾಪ

 

ನವದೆಹಲಿ: ಲೋಕಸಭೆ ಚುನಾವಣೆಯ ಬಿರುಸು ಜೋರಾಗುತ್ತಿದೆ. ಇಂದು ಲೋಕಸಭೆ ಚುನಾವಣೆ 2024ರ ದಿನಾಂಕವೂ ಘೊಷಣೆಯಾಗಲಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾರೆ

ಪತ್ರದಲ್ಲಿ “ಪ್ರಿಯ ದೇಶವಾಸಿಗಳೇ, 140 ಕೋಟಿ ಜನರ ಆಶೀರ್ವಾದ, ಬೆಂಬಲ ಹಾಗೂ ಸ್ಫೂರ್ತಿಯಿಂದಾಗಿಯೇ 10 ವರ್ಷಗಳಿಂದ ಉತ್ತಮ ಆಡಳಿತ ನೀಡಲು ಸಾಧ್ಯವಾಗಿದೆ. ಬಡವರು, ರೈತರು, ಯುವಕರು ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಒಂದು ದಶಕದಲ್ಲಿ ನಮ್ಮ ಸರ್ಕಾರವು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆಲ್ಲ ನಿಮ್ಮ ಆಶೀರ್ವಾದವೇ ಕಾರಣ” ಎಂದಿದ್ದಾರೆ.

“ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಸುಸಜ್ಜಿತ ಮನೆಗಳ ನಿರ್ಮಾಣದ ಯಶಸ್ಸು, ವಿದ್ಯುತ್ ಸಂಪರ್ಕ, ಪ್ರತಿಯೊಬ್ಬರ ಮನೆಗಳಿಗೂ ನೀರು ಹಾಗೂ ಅಡುಗೆ ಅನಿಲ ಸಿಲಿಂಡರ್ ಪೂರೈಕೆ, ಆಯುಷ್ಮಾನ್ ಭಾರತ್ ಯೋಜನೆ ಅನ್ವಯ ಉಚಿತ ಚಿಕಿತ್ಸೆ, ರೈತರಿಗೆ ಹಣಕಾಸು ನೆರವು, ಮಾತೃ ವಂದನಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ನೆರವು ನೀಡುವುದು ಸೇರಿ ಹತ್ತಾರು ಯೋಜನೆಗಳ ಯಶಸ್ಸಿಗೆ ನೀವು ನೀಡಿದ ಬೆಂಬಲ, ನನ್ನ ಮೇಲೆ ಇಟ್ಟ ನಂಬಿಕೆಯೇ ಕಾರಣ ಎಂದಿದ್ದಾರೆ.
370ನೇ ವಿಧಿ ರದ್ದು ಜಿಎಸ್‌ಟಿ ಬಗ್ಗೆ ಪ್ರಸ್ತಾಪಿಸಿ,“ದೇಶದ ಜನ ನಮ್ಮ ಮೇಲೆ ಇಟ್ಟ ನಂಬಿಕೆಯಿAದಲೇ ಐತಿಹಾಸಿಕ ತೀರ್ಮಾನಗಳನ್ನು ಕೂಡ ತೆಗೆದುಕೊಳ್ಳಲು ಸಾಧ್ಯವಾಗಿದೆ. ಜಿಎಸ್‌ಟಿ ಜಾರಿ, 370ನೇ ವಿಧಿ ರದ್ದು, ತ್ರಿವಳಿ ತಲಾಕ್ ನಿಷೇಧ, ನಾರಿ ಶಕ್ತಿ ವಂದನಾ ಕಾಯ್ದೆ, ನೂತನ ಸಂಸತ್ ಭವನದ ಉದ್ಘಾಟನೆ, ಉಗ್ರವಾದ ಹಾಗೂ ಎಡಪಂಥೀಯ ತೀವ್ರವಾದದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಾಯಿತು” ಎಂದು ಬರೆದಿದ್ದಾರೆ.

error: Content is protected !!