ಪುತ್ತೂರು : ಶಾಸಕರ ಬೆಂಬಲಿಗರಿಂದ ಗೂಂಡಾಗಿರಿ: ‘ಅನುದಾನ ಬಳಕೆಯ ಸ್ಪಷ್ಟನೆ ಕೇಳಿದ್ರಲ್ಲಿ ತಪ್ಪೇನಿದೆ: ಕಾಂಗ್ರೆಸ್ ಮರಿ ರೌಡಿಗಳ ಅಟ್ಟಹಾಸಕ್ಕೆ ಉತ್ತರಿಸಲು ಸಿದ್ಧ’ : ಬೃಜೇಶ್ ಚೌಟ

ಪುತ್ತೂರು : ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯರೊಬ್ಬರ ಮನೆಗೆ ತಂಡವೊಂದು ದಾಳಿ ಮಾಡಿ ದಾಂಧಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿ ಮಾ.17ರಂದು ಸಂಜೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯ ಜಯಾನಂದ ಕೆ. ಬಂಗೇರ ಅವರ ಮನೆಗೆ ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗರು ಎನ್ನಲಾದ ತಂಡ ಕಾಂಗ್ರೇಸ್ ಸರಕಾರದ ಅನುದಾನಕ್ಕೆ ಸಂಬಂಧಿಸಿದಂತೆ ಬ್ಯಾನರ್ ವೊಂದನ್ನು ಹಿಡಿದು ಸಂಜೆ ವೇಳೆ ಮನೆ ಅಂಗಳಕ್ಕೆ ದಾಳಿ ನಡೆಸಿದ್ದಾರೆ.

ಘಟನೆಯ ಕಾರಣ

ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಅನ್ನೋ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಹಾಕಿದ್ದರು. ಇದೇ ವಿಚಾರಕ್ಕೆ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡ ಚೆಂಡೆ ವಾಲಗದ ಮೂಲಕ ಕಾಂಗ್ರೆಸ್ ನ ಅನುದಾನದ ಬ್ಯಾನರ್ ಹಿಡಿದು ಬಿಜೆಪಿಯ ಜಯಾನಂದ ಅವರ ಮನೆಗೆ ನುಗ್ಗಿದೆ. ಬಳಿಕ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಜೀವಬೇದರಿಕೆ ಕೂಡ ಹಾಕಿದ್ದಾರೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದು, ನೀಡಿದ ದೂರಿನಲ್ಲಿ ಜೀವಬೇದರಿಕೆಯ ಬಗ್ಗೆ ತಿಳಿಸಲಾಗಿದೆ.

ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಎಚ್ಚರಿಕೆ
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಅವರು ಘಟನೆಯನ್ನು ಖಂಡಿಸಿ ‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲಿಸರು ಯಾವುದೇ ಪ್ರಭಾವಕ್ಕೆ ಮಣಿಯದೇ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು‘ ಎಂದು ಒತ್ತಾಯಿಸಿದ್ದಾರೆ.

error: Content is protected !!