ಬೆಂಗಳೂರು :ಬಿಸಿಲಿನ ಬೇಗೆಯಲ್ಲಿ ತತ್ತರಿಸುತ್ತಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ.ಮಾರ್ಚ್ 20 ರಿಂದ 24ರವರೆಗೆ
ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ದು . ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ಏಪ್ರಿಲ್‌ನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್‌ನಿನೋ ಪ್ರಭಾವ ಕಡಿಮೆಯಾಗಲಿದೆ. ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.