ಬೆಂಗಳೂರು: ಶಾಲೆ ಬಳಿ ಬೃಹತ್ ಪ್ರಮಾಣದ ಸ್ಫೋಟಕ ಪತ್ತೆ!

ಬೆಂಗಳೂರು: ಪ್ರತಿಷ್ಠಿತ ಶಾಲೆಯೊಂದರ ಮುಂಭಾಗದಲ್ಲಿ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಆತಂಕ ಮೂಡಿಸಿವೆ.

ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಬೃಹತ್ ಪ್ರಮಾಣದ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಸಿಕ್ಕಿವೆ. ಈ ಸ್ಫೋಟಕಗಳನ್ನು ಟ್ರ‍್ಯಾಕ್ಟರ್ ಒಂದರಲ್ಲಿ ಇಟ್ಟಿರುವುದು ಪತ್ತೆಯಾಗಿದೆ.

ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಇಟ್ಟಿರುವ ಮಾಹಿತಿ ಇದೆಯಾದರೂ ಲೆಸೆನ್ಸ್ ಇಲ್ಲದೇ ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಟ್ಟಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

error: Content is protected !!